
ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಆಗಸ್ಟ್ 28ರೊಳಗೆ ಅರ್ಜಿ ಸಲ್ಲಿಸಬೇಕಿದ್ದು, ಹುದ್ದೆಗಳಿಗೆ ಅನುಗುಣವಾಗಿ ಎಂಜಿನಿಯರಿಂಗ್ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಕಡ್ಡಾಯವಾಗಿದೆ.
ಸಾಮಾನ್ಯ ಮತ್ತು ಒಬಿಸಿ ವರ್ಗದ ಪುರುಷ ಅಭ್ಯರ್ಥಿಗಳು 25 ರೂಪಾಯಿ ಶುಲ್ಕ ಪಾವತಿಸಬೇಕಿದ್ದು, ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡದವರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.