ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಅಕ್ಟೋಬರ್ 29ರಂದು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಿಯಕರನನ್ನು ಭೇಟಿಯಾಗಲು ತೆರಳಿದ್ದ ಬಾಲಕಿ ವಾಪಸ್ ಬರುವಾಗ ಇ-ರಿಕ್ಷಾ ಚಾಲಕ ಹಾಗೂ ಇತರ ಇಬ್ಬರು ಸೇರಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೃತ್ಯವೆಸಗಿದ್ದಾರೆ ಎಂದು ಪಲಾಮು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿಯ ಆರೋಗ್ಯ ಸ್ಥಿರವಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.