ಆಸ್ಟ್ರೇಲಿಯಾದ ಗ್ರಿಫಿತ್ ವಿಶ್ವವಿದ್ಯಾಲಯವು ಭಾರತೀಯ ವಿದ್ಯಾರ್ಥಿಗಳಿಗೆ ವೈಸ್ ಚಾನ್ಸಲರ್ಸ್ ಇಂಟರ್‌ನ್ಯಾಷನಲ್ ಸ್ಕಾಲರ್‌ಶಿಪ್ ಯೋಜನೆಯನ್ನು ಘೋಷಿಸಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಡೀ ಕೋರ್ಸ್ ಅವಧಿಗೆ ಬೋಧನಾ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿ ದೊರೆಯಲಿದೆ.
2026 ಹಾಗೂ 2027ರ ಶೈಕ್ಷಣಿಕ ವರ್ಷಗಳಲ್ಲಿ ಪೂರ್ಣಾವಧಿ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‌ಗಳಿಗೆ ಸೇರ್ಪಡೆಯಾಗುವ ಭಾರತೀಯ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು.
ಅರ್ಹತಾ ಮಾನದಂಡಗಳ ಪ್ರಕಾರ, ಅಭ್ಯರ್ಥಿಯು ಕನಿಷ್ಠ 6.0 GPA (ಅಥವಾ ಅದಕ್ಕೆ ಸಮಾನವಾದ ಶೇಕಡಾವಾರು ಅಂಕ) ಹೊಂದಿರಬೇಕು ಮತ್ತು ಇಂಗ್ಲಿಷ್ ಭಾಷಾ ಪ್ರಾವೀಣ್ಯತೆಯ ಮಾನದಂಡಗಳನ್ನು ಪೂರೈಸಬೇಕು.