
ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ಚರ್ಚೆ ಜೋರಾಗಿರುವ ನಡುವೆ, ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ರಾಜಕೀಯ ಎದುರಾಳಿಗಳನ್ನು ಮತ್ತು ಭವಿಷ್ಯದಲ್ಲಿ ತಮಗೆ ಅಡ್ಡಿಯಾಗಬಹುದು ಎನಿಸುವವರನ್ನು ಬ್ಲ್ಯಾಕ್ಮೇಲ್ ಮಾಡಲು ಇಂತಹ ವಿಡಿಯೋಗಳನ್ನು ಬಳಸಲಾಗುತ್ತಿದೆ ಎಂದು ನವದೆಹಲಿಯಲ್ಲಿ ತಿಳಿಸಿದ್ದಾರೆ.
ಈ ಸಂಪೂರ್ಣ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ.