
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು ಮತ್ತು ವರ್ತಕರ ಸಮಸ್ಯೆಗಳನ್ನು ಆಲಿಸಿದರು.
ಮಾರುಕಟ್ಟೆಯಲ್ಲಿ ತೂಕದಲ್ಲಿ ಮೋಸ ನಡೆಯುತ್ತಿರುವ ಬಗ್ಗೆ ರೈತರು ಸಿಎಂ ಬಳಿ ದೂರು ನೀಡಿದ್ದು, ಕೃಷಿ ಸಚಿವರು ಮಾರುಕಟ್ಟೆಗೆ ಭೇಟಿ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ರೈತರ ಹಿತಾಸಕ್ತಿ ಕಾಪಾಡಲು ಮತ್ತು ಮಾರುಕಟ್ಟೆಯ ಸುಗಮ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.