
ಉಡುಪಿಯ ಹೊಸಂಗಡಿಯ ಕೆಪಿಸಿಎಲ್ ಸಂಸ್ಥೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಗಾಗಿ 12 ಸಾವಿರ ರೂ. ವೇತನದ ಕೆಲಸಕ್ಕೆ 35 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಸಂಭಾಷಣೆ ಮತ್ತು ಗೂಗಲ್ ಪೇ ಮೂಲಕ ಹಣ ವರ್ಗಾವಣೆಯಾದ ಸ್ಕ್ರೀನ್‌ಶಾಟ್‌ಗಳು ಈ ಆರೋಪಕ್ಕೆ ಪುಷ್ಟಿ ನೀಡುತ್ತಿವೆ.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೂರನೇ ವ್ಯಕ್ತಿಯೊಬ್ಬರ ಪಾತ್ರವಿದ್ದು, ಬಡ ಯುವಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದಲಿತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.