
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿದ್ದ ಅಜಿತ್ (32), ರಾಕೇಶ್ (22), ಸಂದೀಪ್ (33) ಹಾಗೂ ಶೃತಿ (28) ಎಂಬುವವರು ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಹೊರವಲಯದ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ಕಾರು ಡಿವೈಡರ್ಗೆ ಡಿಕ್ಕಿಹೊಡೆದು ಆಂಧ್ರಪ್ರದೇಶದ ಗುಂತಕಲ್ ಮೂಲದ ಇಮ್ರಾನ್ ದಾದಾಕಲೇದರ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.