
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್ಟಿಎ) ದಸರಾ ಹಬ್ಬದ ದಿನವಾದ ಅಕ್ಟೋಬರ್ 20ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.
ಈ ಒಪ್ಪಂದದಿಂದ ನ್ಯೂಜಿಲೆಂಡ್ಗೆ ರಫ್ತಾಗುವ ಭಾರತದ ಸರಕು ಮತ್ತು ಸೇವೆಗಳಿಗೆ ಶೇ 100ರಷ್ಟು ಸುಂಕ ವಿನಾಯಿತಿ ಸಿಗಲಿದೆ.
ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ 20 ಬಿಲಿಯನ್ ಡಾಲರ್ (₹1.91 ಲಕ್ಷ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಿದೆ.