
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್, ಕಾಶ್ಮೀರ ವಿಷಯವನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತಾಪಿಸಿ ಕಾಶ್ಮೀರಿಗಳಿಗೆ ಸ್ವಯಂ ನಿರ್ಣಯದ ಹಕ್ಕು ಸಿಗಬೇಕೆಂದು ವಾದಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ ಮತ್ತು ಮುಜಫರಾಬಾದ್ ಸೇರಿದಂತೆ ವಿವಿಧೆಡೆ ತೀವ್ರ ವಿದ್ಯುತ್ ದರ ಏರಿಕೆ, ತೆರಿಗೆ ಮತ್ತು ನಿರುದ್ಯೋಗದ ವಿರುದ್ಧ ಜನರು ದೊಡ್ಡ ಮಟ್ಟದ ಸಾರ್ವಜನಿಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಪಾಕಿಸ್ತಾನ ಸರ್ಕಾರವು ಈ ಆರ್ಥಿಕ ಹಾಗೂ ರಾಜಕೀಯ ಪ್ರತಿಭಟನೆಗಳನ್ನು ಹತೋಟಿಗೆ ತರಲು ಭದ್ರತಾ ಪಡೆಗಳನ್ನು ನಿಯೋಜಿಸಿದ್ದು, ಬಲಪ್ರಯೋಗದಿಂದ ಸಂಘರ್ಷ ಉಂಟಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.