
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಐಡಿ ಅಧಿಕಾರಿಗಳು ನವದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಮೂಲದವರಾದ ಬಸವರಾಜ ಕನ್ನಾಳೆ ಅವರ ಮನೆಗೆ ಭಾನುವಾರ ಭೇಟಿ ನೀಡಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
ಈ ನೇಮಕಾತಿ ಅಕ್ರಮದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಆರೋಪಿಯ ಬಂಧನದ ನಂತರ ಪ್ರಕರಣದ ಇತರ ಭಾಗಿದಾರರ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆಯಿದೆ.