
ಕೇಂದ್ರ ಸರ್ಕಾರವು ಪರೀಕ್ಷಾ ಅಕ್ರಮಗಳನ್ನು ತಡೆಯಲು 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗಗಳ ತಡೆ) ತಿದ್ದುಪಡಿ ವಿಧೇಯಕ-2026' ಅನ್ನು ಜುಲೈ 27ರಂದು ಲೋಕಸಭೆಯಲ್ಲಿ ಮಂಡಿಸಲಿದೆ.
ಈ ಮಸೂದೆಯಡಿ ಪರೀಕ್ಷಾ ಅಕ್ರಮಗಳ ತನಿಖೆಯನ್ನು 2 ತಿಂಗಳೊಳಗೆ ಪೂರ್ಣಗೊಳಿಸುವುದು ಮತ್ತು ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳಲ್ಲಿ 3 ತಿಂಗಳೊಳಗೆ ವಿಚಾರಣೆ ಮುಗಿಸುವುದು ಕಡ್ಡಾಯವಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವ ಕೋಚಿಂಗ್ ಸೆಂಟರ್‌ಗಳು ಮತ್ತು ಏಜೆನ್ಸಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಪಡೆ (STF) ರಚನೆಗೆ ಸರ್ಕಾರ ಮುಂದಾಗಿದೆ.