
ನಿರ್ದೇಶಕ ಲೋಕೇಶ್ ಕನಗರಾಜ್ ನಾಯಕನಾಗಿ ನಟಿಸಿರುವ 'ಡಿ ಸಿ' ಚಿತ್ರವು ಮೊದಲ ದಿನವೇ ಭಾರತದಲ್ಲಿ 4.10 ಕೋಟಿ ರೂಪಾಯಿ ನೆಟ್ ಗಳಿಕೆ ಮಾಡುವ ಮೂಲಕ ಉತ್ತಮ ಆರಂಭ ಪಡೆದಿದೆ.
ಪ್ರಪಂಚದಾದ್ಯಂತ 5.70 ಕೋಟಿ ರೂಪಾಯಿ ಗ್ರಾಸ್ ಗಳಿಸಿರುವ ಈ ಚಿತ್ರ, ದೇಶಾದ್ಯಂತ ಮೊದಲ ದಿನವೇ 3,504 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ.
ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಆ್ಯಕ್ಷನ್ ಡ್ರಾಮಾ ಚಿತ್ರದಲ್ಲಿ ಲೋಕೇಶ್ ಕನಗರಾಜ್ ದೇವದಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ.