
ಅಮೆರಿಕದಲ್ಲಿ ಮುಂದಿನ ದಿನಗಳಲ್ಲಿ ಇಸ್ರೇಲ್ ವಿರೋಧಿ ಧೋರಣೆ ಹೊಂದಿರುವ ಅಧ್ಯಕ್ಷರು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ.
ಅಕ್ಟೋಬರ್ 27ರಂದು ಇಸ್ರೇಲ್ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಟ್ರಂಪ್ ಅವರ ಅಧಿಕಾರಾವಧಿಯ ಬಾಕಿ ಸಮಯವನ್ನು ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಭವಿಷ್ಯದ ಸವಾಲುಗಳನ್ನು ಎದುರಿಸಲು ಭಾರತದಂತಹ ಪ್ರಮುಖ ದೇಶಗಳೊಂದಿಗೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತಿರುವುದಾಗಿ ನೆತನ್ಯಾಹು ಹೇಳಿದ್ದಾರೆ.