
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಬಳಿಕ ಸಂಗಪ್ಪ ಪೂಜಾರಿ ಎಂಬಾತ ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ.
ದಾಳಿಯಲ್ಲಿ ಸುಖದೇವ್ ಹೊಟ್ಟೆ ಮತ್ತು ಬೆನ್ನಿಗೆ ಗುಂಡು ತಾಗಿದ್ದು, ಅವರ ಸ್ನೇಹಿತ ರಾಜೂ ಅವರಿಗೂ ಗಾಯಗಳಾಗಿದ್ದು, ಇಬ್ಬರನ್ನೂ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರವಾನಿಗೆ ಹೊಂದಿದ ಪಿಸ್ತೂಲ್ ಬಳಸಿ ಕೃತ್ಯ ಎಸೆಗಿದ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪನನ್ನು ಕೊಲ್ಹಾರ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.