
ಟಿ-20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿರುವ ಜೋಸ್ ಬಟ್ಲರ್, ಭಾರತದ 15 ವರ್ಷದ ವೈಭವ್ ಸೂರ್ಯವಂಶಿ ಭವಿಷ್ಯದಲ್ಲಿ ಈ ದಾಖಲೆಯನ್ನು ಮುರಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ವೈಭವ್ ಸೂರ್ಯವಂಶಿ ಐಪಿಎಲ್ 2026ರಲ್ಲಿ 16 ಪಂದ್ಯಗಳಿಂದ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದು, ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಪ್ಲೇಯರ್ ಆಫ್ ದಿ ಸೀರೀಸ್ ಆಗಿದ್ದಾರೆ.
ಈವರೆಗೆ 40 ಟಿ20 ಪಂದ್ಯಗಳನ್ನು ಆಡಿರುವ ವೈಭವ್, 216ಕ್ಕೂ ಹೆಚ್ಚಿನ ಸ್ಟ್ರೈಕ್ ರೇಟ್ನಲ್ಲಿ ಒಟ್ಟು 1,670 ರನ್ ಕಲೆಹಾಕುವ ಮೂಲಕ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.