₹2,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕ ವಿಧಿಸುವ ತೀರ್ಮಾನವನ್ನು ಮರುಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.
ಯುಪಿಐ ವ್ಯವಸ್ಥೆಯ ಹಿತವನ್ನು ಕಾಯಲು ಮತ್ತು ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರ ಹಿಂದೆ ಯಾವುದೇ ವಿದೇಶಿ ಪ್ರಭಾವವಿಲ್ಲ ಎಂದು ತಿಳಿಸಲಾಗಿದೆ.
ಅಮೆರಿಕದ ಒತ್ತಡದಿಂದ ಈ ಶುಲ್ಕ ಜಾರಿಗೆ ತರಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ.