
ಜನರ ಸಮಸ್ಯೆಗಳನ್ನು ಆಲಿಸಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪ್ರಜಾಸೇವಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಕೇವಲ 6 ದಿನಗಳಲ್ಲಿ 13,872 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ತಿಳಿಸಿದ್ದಾರೆ.
ಸ್ವೀಕೃತವಾದ ಒಟ್ಟು ಅರ್ಜಿಗಳ ಪೈಕಿ ಶೇಕಡಾ 35ರಷ್ಟು ಅಂದರೆ ಅತಿ ಹೆಚ್ಚು 9,260 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿವೆ.
ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಅಕ್ಟೋಬರ್ 2ರಂದು 'ನಮ್ಮ ಸೇವಾ' ಆ್ಯಪ್ ಬಿಡುಗಡೆ ಮಾಡಲಾಗುವುದು.