
ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ನಕಲಿ ಮತ್ತು ಕಳಪೆ ಗುಣಮಟ್ಟದ ಸೌಂದರ್ಯವರ್ಧಕಗಳ ವಿರುದ್ಧ ಡ್ರಗ್ಸ್ ಕಂಟ್ರೋಲ್ ಬೋರ್ಡ್ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.
ಲಿಪ್‌ಸ್ಟಿಕ್, ಪೌಡರ್ ಮತ್ತು ಸ್ಕಿನ್ ಸೆರಮ್‌ಗಳಂತಹ ಉತ್ಪನ್ನಗಳನ್ನು ವಶಪಡಿಸಿಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು, ವರದಿ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಕಳಪೆ ಸೌಂದರ್ಯವರ್ಧಕಗಳ ಬಳಕೆಯಿಂದ ಕಿಡ್ನಿ ವೈಫಲ್ಯ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಉಂಟಾಗುವ ಅಪಾಯವಿದ್ದು, ಸಾರ್ವಜನಿಕರು ಎಚ್ಚರದಿಂದಿರಬೇಕೆಂದು ಸರ್ಕಾರ ಎಚ್ಚರಿಕೆ ನೀಡಿದೆ.