
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್‌ನ ಪುಕೆಟ್‌ನಿಂದ ಬಂದ ಪ್ರಯಾಣಿಕನೊಬ್ಬನಿಂದ 3.05 ಕೆಜಿ ತೂಕದ ₹1.07 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇದೇ ವೇಳೆ ಕೋಲಾರದ ಅರಹಳ್ಳಿ ಗೇಟ್ ಬಳಿ ಬೈಕ್ ಸವಾರನ ಕಣ್ಣಿಗೆ ಖಾರದ ಪುಡಿ ಎರಚಿ ₹2 ಲಕ್ಷ ನಗದು ಮತ್ತು ಬೈಕ್ ದರೋಡೆ ಮಾಡಿರುವ ಘಟನೆ ನಡೆದಿದೆ.