
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆಗಸ್ಟ್ 19ರಿಂದ 21ರವರೆಗೆ ಆರ್‌ಎಸ್‌ಎಸ್‌ನ ಅಖಿಲ ಭಾರತ ಸಮನ್ವಯ ಬೈಠಕ್ ನಡೆಯಲಿದ್ದು, ಸಂಘ ಪರಿವಾರದ 32 ಅಂಗಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಬಿಜೆಪಿ, ವಿಶ್ವ ಹಿಂದೂ ಪರಿಷತ್, ಭಾರತೀಯ ಮಜ್ದೂರ್ ಸಂಘ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸೇರಿದಂತೆ ವಿವಿಧ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಜನಸಂಖ್ಯಾ ಅಸಮತೋಲನ, ಮಾದಕ ವಸ್ತು ವಿಮೋಚನೆ ಮತ್ತು ಪಂಚ ಪರಿವರ್ತನ ಮಾದರಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯಲಿದ್ದು, ಡಾ. ಮೋಹನ್ ಭಾಗವತ್ ಮತ್ತು ದತ್ತಾತ್ರೇಯ ಹೊಸಬಾಳೆ ಉಪಸ್ಥಿತರಿರಲಿದ್ದಾರೆ.