
ಯುರೋಪಿಯನ್ ಟಿ20 ಲೀಗ್ನ ಮೊದಲ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಮಾಲೀಕತ್ವದ ಡಬ್ಲಿನ್ ಗಾರ್ಡಿಯನ್ಸ್ ತಂಡವು ಬೆಲ್ಫಾಸ್ಟ್ ವುಲ್ವ್ಸ್ ವಿರುದ್ಧ 52 ರನ್ಗಳ ಸೋಲು ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಬೆಲ್ಫಾಸ್ಟ್ ವುಲ್ವ್ಸ್ ತಂಡ ಮಾರ್ಕ್ ಚಾಪ್ಮನ್ (54 ರನ್) ಮತ್ತು ಗ್ಲೆನ್ ಮ್ಯಾಕ್ಸ್ವೆಲ್ (60 ರನ್) ಅವರ ಅರ್ಧಶತಕಗಳ ನೆರವಿನಿಂದ 184 ರನ್ ಕಲೆಹಾಕಿತು.
ಗುರಿ ಬೆನ್ನಟ್ಟಿದ ಡಬ್ಲಿನ್ ಗಾರ್ಡಿಯನ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.