
ಪಿಎಸ್ಐ ಹುದ್ದೆ ಗಿಟ್ಟಿಸಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಎಸ್.ಬಿ.ಕಾಶಿಲಿಂಗೇಗೌಡ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ತನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ನೇತೃತ್ವದ ಪೀಠ ತಿರಸ್ಕರಿಸಿದೆ.
ಲಸಿಕಾ ಕಾರ್ಡ್ ದಾಖಲೆಗಳನ್ನು ತಿದ್ದಿ ವಂಚನೆ ಎಸಗಲಾಗಿದೆ ಎಂಬ ಆರೋಪವಿರುವ ಕಾರಣ ತನಿಖೆಗೆ ತಡೆ ನೀಡಲಾಗದು ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಶೀಘ್ರ ವರದಿ ಸಲ್ಲಿಸಲು ಸೂಚಿಸಿದೆ.