
ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ನಿಂದಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಸಿಡಿಲಿನ ಆರ್ಭಟಕ್ಕೆ ಇದುವರೆಗೆ 14 ಜನರು ಮೃತಪಟ್ಟಿದ್ದಾರೆ.
ನೀಲಗಿರಿ ಜಿಲ್ಲೆಯಲ್ಲಿ 62 ಕಡೆ ಭೂಕುಸಿತ ಉಂಟಾಗಿದ್ದು, ರಸ್ತೆಗೆ ಬಂಡೆ ಬಿದ್ದು ಬಸ್ ಚಾಲಕನೊಬ್ಬ ಮೃತಪಟ್ಟಿದ್ದಾನೆ.
ಮುನ್ನೆಚ್ಚರಿಕಾ ಕ್ರಮವಾಗಿ ಊಟಿ, ಕೊಡೈಕೆನಾಲ್, ಯೆರ್ಕಾಡ್ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.