
2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿದೆ.
ಐರ್ಲೆಂಡ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಬೆನ್ನಲ್ಲೇ ಅಫ್ಘಾನಿಸ್ತಾನ್ ತಂಡವು ಐಸಿಸಿ ರ್ಯಾಂಕಿಂಗ್ ಮೂಲಕ ವಿಶ್ವಕಪ್ಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿದೆ.
ಭಾರತ, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್ ಹಾಗೂ ಆತಿಥೇಯ ಸೌತ್ ಆಫ್ರಿಕಾ ಮತ್ತು ಝಿಂಬಾಬ್ವೆ ಸೇರಿದಂತೆ ಒಟ್ಟು 10 ತಂಡಗಳು ವಿಶ್ವಕಪ್ಗೆ ನೇರ ಪ್ರವೇಶ ಪಡೆದಿವೆ.