
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ಟೋಬರ್ 12ರಂದು ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟವಾಗಿದ್ದ ಈ ಪೋಸ್ಟ್ ಅನ್ನು ಮರುದಿನವೇ ಡಿಲಿಟ್ ಮಾಡಿ ಬೇಷರತ್ ಕ್ಷಮಾಪಣೆ ಕೋರಲಾಗಿದ್ದು, ಪಕ್ಷದ ಪರ ವಕೀಲರು ಅಫಿಡವಿಟ್ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ವಿವಾದದ ಹಿನ್ನೆಲೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರನ್ನು ಆಮಿಕಸ್ ಕ್ಯೂರಿಯಾಗಿ ನೇಮಿಸಿದ್ದು, ಅಟಾರ್ನಿ ಜನರಲ್ ಅವರ ನೆರವನ್ನು ಕೋರಿದೆ.