
ಕೋಲಾರ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಕಾರ್ಮಿಕ ಸಂಘಟನೆಗಳು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿವೆ.
ಕಂಪನಿಯು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ತಡವಾಗಿ ಆಸ್ಪತ್ರೆಗೆ ಸೇರಿಸಿ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದು, ನೂರಾರು ನೌಕರರು ಸೇರಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.
ಪ್ರತಿಭಟನಕಾರರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ತಿಳಿಸಿದ್ದಾರೆ.