Indian Politics
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

tv9kannada2h
THE BRIEF
1

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 2019ರ ಸೆಪ್ಟೆಂಬರ್ 3ರಂದು ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

2

ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿ ಪ್ರೀತೇಶ್ ಮತ್ತು ಕಿರಣ್ ಅವರಿಗೆ ತಲಾ 3 ಲಕ್ಷ ರೂ.ಗಳಂತೆ ಒಟ್ಟು 6 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

3

ನ್ಯಾಯಾಲಯವು ವಸೂಲಿ ಮಾಡುವ ದಂಡದ ಮೊತ್ತದಲ್ಲಿ 5.90 ಲಕ್ಷ ರೂಪಾಯಿಯನ್ನು ಕೊಲೆಯಾದ ಕಾರ್ತಿಕ್ ಅವರ ತಾಯಿ ಹೇಮಾವತಿ ಅವರಿಗೆ ನೀಡುವಂತೆ ಆದೇಶಿಸಿದೆ.