
ಕರ್ನಾಟಕದಾದ್ಯಂತ ಈಶಾನ್ಯ ಮುಂಗಾರು ಮಳೆ ಮುಂದುವರೆಯಲಿದ್ದು, ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 22ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.