
ದಿ ಹಂಡ್ರೆಡ್ ಲೀಗ್‌ನ 16ನೇ ಪಂದ್ಯದಲ್ಲಿ ಸದರ್ನ್ ಬ್ರೇವ್ ತಂಡವು ಲಂಡನ್ ಸ್ಪಿರಿಟ್ ವಿರುದ್ಧ 5 ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ವೇಗದ ಬೌಲರ್ ಜೋಫ್ರಾ ಆರ್ಚರ್ 20 ಎಸೆತಗಳಲ್ಲಿ ಕೇವಲ 9 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು.
ಮೊದಲು ಬ್ಯಾಟಿಂಗ್ ಮಾಡಿದ ಲಂಡನ್ ಸ್ಪಿರಿಟ್ 105 ರನ್‌ಗಳಿಗೆ ಆಲೌಟ್ ಆಗಿದ್ದು, ಸದರ್ನ್ ಬ್ರೇವ್ ತಂಡವು 97 ಎಸೆತಗಳಲ್ಲಿ ಗುರಿ ತಲುಪಿತು.