
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಹಾಗೂ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.
ಮಾಸ್ಟರ್ ಮೈಂಡ್ ಶಬ್ಬೀರ್ ಟೆಲಿಗ್ರಾಂ ಆ್ಯಪ್ ಮೂಲಕ ಉಗ್ರ ಕೃತ್ಯಗಳ ಬಗ್ಗೆ ಚರ್ಚಿಸುತ್ತಿದ್ದನು ಹಾಗೂ ಬಿಹಾರ ಮೂಲದ ಸಲಾಮಿನ್ ಈತನ ಪೋಸ್ಟ್ ಗಳನ್ನು ಫಾರ್ವರ್ಡ್ ಮಾಡುತ್ತಿದ್ದನೆಂದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 113 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ಜಾಲದಲ್ಲಿರುವ ಇತರ ಸದಸ್ಯರ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.