
ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಒಟ್ಟು 1,614 ಕೋಟಿ ರೂ. ನಷ್ಟ ಅನುಭವಿಸಿರುವ ಬಿಎಂಆರ್ಸಿಎಲ್, ಪ್ರತಿ ಮೂರು ವರ್ಷಕ್ಕೊಮ್ಮೆ ಶೇ 12ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಿದೆ.
2024-25ನೇ ಸಾಲಿನಲ್ಲಿ 27.65 ಕೋಟಿ ಪ್ರಯಾಣಿಕರು ಮೆಟ್ರೋ ಬಳಸಿದ್ದರೂ, 1,935 ಕೋಟಿ ರೂ. ವೆಚ್ಚದ ಕಾರಣ ನಿಗಮವು 623 ಕೋಟಿ ರೂ. ನಷ್ಟ ದಾಖಲಿಸಿದೆ.
ಕಾರ್ಯಾಚರಣೆ ವೆಚ್ಚದ ಹೊರೆ ಹೆಚ್ಚಾಗುತ್ತಿರುವುದರಿಂದ ದರ ಪರಿಷ್ಕರಣೆ ಅನಿವಾರ್ಯ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ದರ ನಿಗದಿ ಸಮಿತಿಗೆ ಮನವಿ ಸಲ್ಲಿಸಿದ್ದಾರೆ.