
ನೈಸ್ ರಸ್ತೆ ಟೋಲ್ ಸಂಗ್ರಹದ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಸರ್ಕಾರ ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಅಭಿಪ್ರಾಯ ಪಡೆದ ನಂತರವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ ಸಿಎಂ, ದೇವೇಗೌಡರು ಬೇಕಿದ್ದರೆ ಕೋರ್ಟ್ಗೆ ಹೋಗಬಹುದು ಅಥವಾ ಉಪವಾಸ ಸತ್ಯಾಗ್ರಹ ಮಾಡಬಹುದು ಎಂದು ತಿರುಗೇಟು ನೀಡಿದ್ದಾರೆ.
ಈ ಹಿಂದೆ ಸರ್ಕಾರಗಳು ಮಾಡಿಕೊಂಡಿರುವ ಅಗ್ರಿಮೆಂಟ್ಗಳನ್ನು ಪರಿಶೀಲಿಸಲಾಗಿದ್ದು, ಆಸ್ತಿ ಕಳೆದುಕೊಂಡವರ ರಕ್ಷಣೆಗೆ ಆದ್ಯತೆ ನೀಡಿ ಕಾನೂನುಬದ್ಧವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.