
ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅತ್ತಿಬೆಲೆ ಗಡಿಯಲ್ಲಿ ಬಂದ್ ಆಚರಿಸಲಾಯಿತು.
ಆಗಸ್ಟ್ 13ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ನಡೆಸುವುದಾಗಿ ಘೋಷಿಸಲಾಗಿದ್ದು, ಅಂದು ಆಟೋ, ಅಂಗಡಿ, ಹೋಟೆಲ್ ಸೇವೆಗಳು ಸ್ಥಗಿತಗೊಳ್ಳಲಿವೆ.
ಮಂಗಳವಾರ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.