
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು 'ಅರ್ನಬ್ ಸೈಕ್ಲೋನ್' ಪ್ರಭಾವದಿಂದ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.
ಸೆಪ್ಟೆಂಬರ್ 28ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡ ಸೇರಿದಂತೆ ಕೆಲವು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ.