
ಏಪ್ರಿಲ್ 2026ರ ಅಂತ್ಯಕ್ಕೆ 1,30,35,318 ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಮೃತಪಟ್ಟವರ ಖಾತೆಗೆ ಹಣ ಜಮೆಯಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನೋಂದಾಯಿತ ಫಲಾನುಭವಿಗಳಲ್ಲಿ 2,88,376 ಮಹಿಳೆಯರು ಮೃತಪಟ್ಟಿದ್ದು, ಅದರಲ್ಲಿ 1,03,922 ಮಂದಿ ಮರು ನೋಂದಣಿ ಮಾಡಿಕೊಂಡು ಧನಸಹಾಯ ಪಡೆಯುತ್ತಿದ್ದಾರೆ.
ಆದಾಯ ತೆರಿಗೆ ಮತ್ತು ಜಿಎಸ್ಟಿ ಪಾವತಿಸುವ 1,94,560 ಮಹಿಳೆಯರನ್ನು ಅನರ್ಹರೆಂದು ಗುರುತಿಸಿ ಯೋಜನೆಯಿಂದ ಕೈಬಿಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.