
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 74,000 ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರವು ಹೈಟೆಕ್ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಒನ್-ಟೈಮ್ ಲಾಕಬಲ್ ಸೆಕ್ಯೂರಿಟಿ ಟ್ರಂಕ್ಗಳು ಮತ್ತು 5 ಹಂತದ ಟ್ಯಾಂಪರ್-ಪ್ರೂಫ್ ಪ್ಯಾಕಿಂಗ್ ವ್ಯವಸ್ಥೆಯನ್ನು ಬಳಸಲಾಗುತ್ತಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಜ್ಯಾಮರ್ಗಳನ್ನು ಅಳವಡಿಸಲಾಗಿದ್ದು, ಅಕ್ರಮಗಳ ಬಗ್ಗೆ ದೂರು ನೀಡಲು 112 ಸಹಾಯವಾಣಿ ಮತ್ತು 9480800308, 9480800106 ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ.