
ಮಹಾರಾಷ್ಟ್ರದ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಬೆಳಗಾವಿ-ಮಹಾರಾಷ್ಟ್ರ ಗಡಿಯ ಹಾಜಗೋಳಿ ಗ್ರಾಮದಲ್ಲಿ ನಡೆಸಿದ ದಾಳಿಯಲ್ಲಿ ಅಕ್ರಮ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದೆ.
ಈ ಕಾರ್ಯಾಚರಣೆಯಲ್ಲಿ 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 208 ಗ್ರಾಂ ಡ್ರಗ್ಸ್ ಹಾಗೂ ತಯಾರಿಕಾ ಯಂತ್ರೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳಗಾವಿಯ ಇಬ್ಬರು ಸೇರಿದಂತೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ.
ಮುಂಬೈನಲ್ಲಿ ನಡೆದ ತನಿಖೆಯ ಸುಳಿವಿನ ಮೇರೆಗೆ ನಡೆಸಿದ ಈ ದಾಳಿಯಲ್ಲಿ, ಈ ಗ್ಯಾಂಗ್ ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದದ್ದು ಬಯಲಾಗಿದೆ.