
ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಹೋಟೆಲ್ ಒಂದರಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.