
ಕನ್ನಡ ಚಿತ್ರರಂಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 160 ಎಕರೆ ಜಾಗದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಯೋಜನೆಗೆ ಅಂದಾಜು ₹729.43 ಕೋಟಿ ವೆಚ್ಚವಾಗಲಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಚಿತ್ರ ನಿರ್ಮಾಣ, ಚಿತ್ರೀಕರಣ ಹಾಗೂ ಸಿನಿಮಾ ಸಂಬಂಧಿತ ಚಟುವಟಿಕೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಉದ್ಯೋಗಾವಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.