
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳು ಮಂಡಿಸಲಿರುವ ವಾಗ್ದಂಡನೆ ನಿರ್ಣಯವನ್ನು ಸಂವಿಧಾನದ ಕಟ್ಟುನಿಟ್ಟಿನ ನಿಯಮಗಳ ಪ್ರಕಾರವೇ ಪರಿಶೀಲಿಸಲಾಗುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟಪಡಿಸಿದ್ದಾರೆ.
ಸಿಇಸಿ ವಿರುದ್ಧ ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಏಕಪಕ್ಷೀಯ ಅಧಿಕಾರ ಚಲಾವಣೆ ಆರೋಪ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ವಜಾಗೆ ಒತ್ತಾಯಿಸಿವೆ.
ಅಕ್ಟೋಬರ್ 26ರಿಂದ ಆರಂಭವಾಗುವ 12ನೇ ಬ್ರಿಕ್ಸ್ ಸಂಸದೀಯ ವೇದಿಕೆಯಲ್ಲಿ ಭಯೋತ್ಪಾದನೆ ಹಾಗೂ ಹವಾಮಾನ ಬದಲಾವಣೆ ಕುರಿತು ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.