
ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಮಡಿವಾಳ ಸಂಚಾರ ಪೊಲೀಸರು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಹೊಸ ಸಂಚಾರ ನಿಯಮ ಜಾರಿಗೆ ತಂದಿದ್ದಾರೆ.
ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ.
ವಾಹನ ಸವಾರರು ಕೃಪಾನಿಧಿ ಜಂಕ್ಷನ್ ಮೂಲಕ ವಾಟರ್ ಟ್ಯಾಂಕ್ ಜಂಕ್ಷನ್ ತಲುಪಿ, ಮಡಿವಾಳ ಮಾರುಕಟ್ಟೆ ರಸ್ತೆಯ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.