
ರಾಜ್ಯದಲ್ಲಿ ಬಡವರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50,000 ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಡಿಸೆಂಬರ್ ಒಳಗೆ ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ಹಂಚುವ ಗುರಿ ಹೊಂದಲಾಗಿದ್ದು, ಸೆಪ್ಟೆಂಬರ್ 15 ರೊಳಗೆ ಸೂಕ್ತ ಭೂಮಿಯನ್ನು ಗುರುತಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು 15,50,000 ನಿವೇಶನಗಳನ್ನು ಹಂಚುವ ಗುರಿ ಹೊಂದಿದ್ದು, ಬಗರ್ ಹುಕುಂ ಯೋಜನೆಯಡಿ ಬಾಕಿ ಉಳಿದಿರುವ 6,98,933 ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ತಹಶೀಲ್ದಾರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.