
ಆಗಸ್ಟ್ 26ರಂದು ಬಿಡುಗಡೆಯಾಗಲಿರುವ 'ಟಾಕ್ಸಿಕ್' ಚಿತ್ರದ ಹೈದರಾಬಾದ್ ಪ್ರೀ-ರಿಲೀಸ್ ಈವೆಂಟ್ನಲ್ಲಿ ಸೌಂಡ್ ಬಾಕ್ಸ್ ಕುಸಿದು ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ವೇದಿಕೆ ಮೇಲೆ ನಟ ಯಶ್ ಮಾತನಾಡುತ್ತಿದ್ದಾಗ ಬೃಹತ್ ಸೌಂಡ್ ಬಾಕ್ಸ್ ಸೆಟಪ್ ಏಕಾಏಕಿ ಕುಸಿದು ಬಿದ್ದಿದೆ.
ಘಟನೆಯ ನಂತರ ಯಶ್ ಭಾಷಣ ನಿಲ್ಲಿಸಿ ವಿದ್ಯಾರ್ಥಿಗಳ ಸುರಕ್ಷತೆ ಖಚಿತಪಡಿಸಿಕೊಂಡರು ಮತ್ತು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.