
ದೇಶಾದ್ಯಂತ ಪೆಟ್ರೋಲ್‌ನಲ್ಲಿ ಶೇ 20ರಷ್ಟು ಎಥನಾಲ್ ಮಿಶ್ರಣ ಮಾಡುತ್ತಿದ್ದು, ಇದನ್ನು ವಿರೋಧಿಸುವವರ ವಿರುದ್ಧ ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಎಥನಾಲ್ ಬಳಕೆಯಿಂದ ದೇಶದ 4 ಲಕ್ಷ ಕೋಟಿ ವಿದೇಶಿ ವಿನಿಮಯ ಹಣ ಉಳಿತಾಯವಾಗಲಿದ್ದು, ಆರ್ಥಿಕ ಸ್ವಾವಲಂಬನೆಗೆ ಇದು ಸಹಕಾರಿಯಾಗಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದೆ ರೈತರ ಹಿತದೃಷ್ಟಿಯಿಂದ ಎಥನಾಲ್ ಬಳಕೆಯನ್ನು ಮುಂದುವರಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.