
ಬೆಂಗಳೂರು ಸಂಚಾರ ಪೊಲೀಸರು ಶುಕ್ರವಾರ ಬೆಳಗ್ಗೆ 6ರಿಂದ 9 ಗಂಟೆವರೆಗೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 40 ನೀರಿನ ಟ್ಯಾಂಕರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ತಪಾಸಣೆ ವೇಳೆ ಒಟ್ಟು 1,476 ಟ್ಯಾಂಕರ್ಗಳನ್ನು ಪರಿಶೀಲಿಸಲಾಗಿದ್ದು, ಆರೋಪಿಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆರ್ಟಿಒ ಕಚೇರಿಗೆ ಶಿಫಾರಸು ಮಾಡಲಾಗಿದೆ.
ಅತಿಗಣ್ಯ ವ್ಯಕ್ತಿಗಳ ಸಂಚಾರದ ಹಿನ್ನೆಲೆಯಲ್ಲಿ ಆಗಸ್ಟ್ 29 ಮಧ್ಯಾಹ್ನ 2.30 ರಿಂದ 4.30 ರವರೆಗೆ ಮತ್ತು ಆಗಸ್ಟ್ 30 ಬೆಳಿಗ್ಗೆ 7 ರಿಂದ 8 ರವರೆಗೆ ಸುರಂಜನ್ದಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ.