2020ರ ದೆಹಲಿ ಗಲಭೆ ವೇಳೆ ಗುಪ್ತಚರ ಬ್ಯೂರೊ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಸೇರಿದಂತೆ ಐವರಿಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಐಪಿಸಿ ಸೆಕ್ಷನ್ 302, 365, 147, 148, 153ಎ, 188 ಮತ್ತು 149ರ ಅಡಿ ಈ ಶಿಕ್ಷೆಯನ್ನು ಜುಲೈ 31ರಂದು ಪ್ರಕಟಿಸಿದ್ದಾರೆ.
ಮರಣದಂಡನೆ ವಿಧಿಸಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ಅಪರಾಧಿಗಳನ್ನು ಸುಧಾರಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಸ್ಪಷ್ಟಪಡಿಸಿದೆ.