
ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗೌಪ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಕೆಪಿಎಸ್‌ಸಿಯ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಂತ್ರಿಕ ಸಹಾಯಕ ಶರಣಪ್ಪ ಅಡವಳ್ಳಿ ಮತ್ತು ಹಿರಿಯ ಸಹಾಯಕ ಸ್ವಾಮಿದಾಸ್ ಎಂಬುವವರನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದು, ಇವರು ಮಧ್ಯವರ್ತಿಗಳಿಗೆ ಮಾಹಿತಿ ರವಾನಿಸುತ್ತಿದ್ದರು.
ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಮಧ್ಯವರ್ತಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಯೋಗ ಸಭೆ ನಡೆಸಿದೆ.