
ಕರ್ನಾಟಕದ 101 ತಾಲೂಕುಗಳಲ್ಲಿ ಮುಂಗಾರು ಮಳೆಯ ತೀವ್ರ ಅಭಾವದಿಂದ ಬರಗಾಲ ಉಂಟಾಗಿದ್ದು, ಈ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬರ ನಿರ್ವಹಣೆಗಾಗಿ ಸರ್ಕಾರ 635 ಕೋಟಿ ರೂ. ಮೀಸಲಿಟ್ಟಿದ್ದು, ಎನ್ಡಿಆರ್ಎಫ್ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾದ 1,239 ಕೋಟಿ ರೂ. ಪೈಕಿ ಮೊದಲ ಕಂತಿನ 450 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗುವುದು.
ಬರದಿಂದಾಗಿ ಜನರು ಗುಳೆ ಹೋಗುವುದನ್ನು ತಡೆಯಲು ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಿಧಾನಸಭಾ ಕ್ಷೇತ್ರಗಳಿಗೆ 189 ಕೋಟಿ ರೂ. ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.