
ಶಿವಮೊಗ್ಗದಲ್ಲಿ ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿವಾಸ ಹಾಗೂ ಬಿಜೆಪಿ ಜಿಲ್ಲಾ ಕಚೇರಿಗೆ ಅವಹೇಳನಕಾರಿ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ಜಗದೀಶ್, ಕಾಂಗ್ರೆಸ್ ಹತಾಶೆಯಿಂದ ಈ ಕೃತ್ಯ ಎಸಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ಪೋಸ್ಟರ್ ಅಂಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.