
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಅಕ್ರಮ ಹಣದಿಂದ ಗೆಳತಿಗೆ ₹26 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿ ಉಡುಗೊರೆಯಾಗಿ ನೀಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಬೀದರ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿರುವ ಬಗ್ಗೆ ಸಿಐಡಿ ಅಧಿಕಾರಿಗಳು ಬಿಲ್ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ತಮ್ಮ ಸಹೋದರನ ಹೆಸರಿನಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪ ಐಷಾರಾಮಿ ವಿಲ್ಲಾವನ್ನು ಕೂಡ ಖರೀದಿಸಿರುವ ಶಂಕೆ ವ್ಯಕ್ತವಾಗಿದೆ.